ಎಸ್ ಎಸ್ ಎಲ್ ಸಿ ಪರೀಕ್ಷೆ-2 ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಳಕಿಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ ಆದ ಹಿನ್ನೆಲೆಯಲ್ಲಿ ಮನನೊಂದು ವಳಕಿಂಡಿ ಗ್ರಾಮದ ಪ್ರಕೃತಿ ಅಶೋಕ್ ಮಾನಕಾರ (16) ವಿದ್ಯಾರ್ಥಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.