ಕರ್ನಾಟಕದ ರಾಜ್ಯವು ದಕ್ಷಿಣ ಭಾರತ ದಲ್ಲೆ ಅತಿ ದೊಡ್ಡ ಆರ್ಥಿಕ ರಾಜ್ಯವಾಗಿದ್ದು, ದೇಶದ ಉನ್ನತ ರಾಜ್ಯಗಳಲ್ಲಿ ಒಂದಾಗಿದೆ. ಮುಖ್ಯವಾಗಿ ಕರ್ನಾಟಕವು ರಾಜ್ಯದ ಜನರಿಗೆ ಮತ್ತು ನೇರೆ ಜನರಿಗೆ ಉದ್ಯೋಗ ಕೊಟ್ಟಿ ಜೀವನ ಕಟ್ಟಿಕೊಳಲ್ಲು ಹೇಳಿ ಮಾಡಿಸಿದ ಸ್ಥಳವಾಗಿದೆ, ಇದೆ ಹೋತ್ತಿನಲ್ಲಿ ನೇರೆ ರಾಜ್ಯದ ಜನರು ಬಂದು ಬೆಂಗಳೂರಿನಲ್ಲಿರುವ ಖಾಸಗಿ ಕಂಪನಿಗಳಲ್ಲಿ ಕೆಲಸ ತೆಗೆದುಕೊಳುತ್ತಿರುವ ಕಾರಣ ಕರ್ನಾಟಕದ ಜನರಿಗೆ ಉದ್ಯೋಗ ಕೊರೆತೆಯಾಗುತ್ತಿದೆ.
ಜುಲೈ ತಿಂಗಳಲ್ಲಿ ಪ್ರಾರಂಭವಾಗಿರುವ ವಿಧಾನಸೌಧ ಚರ್ಚೆಯ ಹಿನ್ನಲೆಯಲ್ಲಿ, ಕರ್ನಾಟಕ ಕಾರ್ಮಿಕ ಸಚಿವರಾದ ಸಂತೊಷ ಲಾಡ್ ರವರು ಮಂಗಳವಾರ ಜುಲೈ 16 ರಂದು 3.51 ಕ್ಕೆ ಈ ವಿಷಯದ ಕೂರಿತು ಸಮಾಜಿಕ ತಲಾಣದಲ್ಲಿ ಏಕ್ಸ ನಲ್ಲಿ ಪೋಷ್ಟ ಹಂಚಿಕೊಡಿದ್ದಾರೆ.
ರಾಜ್ಯದಲ್ಲಿ ಖಾಸಗಿ ಕ್ಷೇತ್ರದ ಸಂಸ್ಥೆಗಳಲ್ಲಿ ಶೇ 50-75ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ ನೀಡಿದೆ. ಸದ್ಯದಲ್ಲೇ ಇದು ವಿಧಾನಸಭೆಯಲ್ಲಿ ಮಂಡನೆಯಾಗಲಿದೆ. ಹೊಸ ಮಸೂದೆಯ ಕುರಿತ ಮಾಹಿತಿ ಇಲ್ಲಿದೆ.
ಕರ್ನಾಟಕದಲ್ಲಿ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 70ರ ವರೆಗೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಈ ಬಗ್ಗೆ ಸಂದೇಶ ಪ್ರಕಟಿಸಿರುವ ಅವರು, ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿಷಯವನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳಲು ಖುಷಿಯಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ.
ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾದ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ತುಂಬ ಖುಷಿಯಾಗುತ್ತಿದೆ.
ಮೀಸಲಾತಿಗೆ ಯಾರು ಅರ್ಹರು?
ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷಗಳಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತಾಡಲು, ಓದಲು ಹಾಗೂ ಬರೆಯಲು ಬರುವವರು ಅಲ್ಲದೇ ನೋಡಲ್ ಏಜೆನ್ಸಿಗಳು ನಡೆಸುವ ಕನ್ನಡ ಭಾಷಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವವರು ಈ ಮೀಸಲಾತಿಗೆ ಅರ್ಹರಿರಲಿದ್ದಾರೆ.
ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ನಿಯಮವನ್ನು ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ ವಿಧಿಸುವ ಅಂಶವನ್ನು ಸಹ ವಿಧೇಯಕದಲ್ಲಿ ಸೇರಿಸಲಾಗಿದ್ದು, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.