ಬೆಳ್ಳಂಬೆಳ್ಳಿಗೆ ಹಣಕಾಸು ಇಲಾಖೆಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

ಬೆಳ್ಳಂಬೆಳ್ಳಿಗೆ ಹಣಕಾಸು ಇಲಾಖೆಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆಯೇ ಹಣಕಾಸು ಇಲಾಖೆ ಕಚೇರಿಗೆ ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಮೊದಲ ಬಜೆಟ್ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.

ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ನರ‍್ಮಲಾ ಸೀತಾರಾಮನ್ ಅವರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ನೀಡಿದರು. ಬಳಿಕ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಬಜೆಟ್ ಪ್ರತಿ ಜೊತೆ ಫೋಟೋ ಪೋಸ್ ನೀಡಿದ್ದಾರೆ

2021ರಿಂದ ನಿರ್ಮಲಾ ಮಾಡುತ್ತಿದ್ದಾರೆ. ಹಣಕಾಸು ಇಲಾಖೆಯಿಂದ ಸಂಸತ್ ಭವನಕ್ಕೆ ತೆರಳಲಿರುವ ನಿರ್ಮಲಾ ಸೀತಾರಾಮನ್ 11 ಗಂಟೆಗೆ ಬಜೆಟ್ ಭಾಷಣ ಮಾಡಲಿದ್ದಾರೆ

Share this post

Post Comment