ಹರ್ ಘರ್ ತಿರಂಗ’ ಅಭಿಯಾನ, ಭಾರತದ ಇಲ್ಲಾ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಹಾಗೂ ರಾಷ್ಟ್ರಧ್ವಜದ ಜೊತಗೆ ಸೆಲ್ಫಿ ತೆಗೆದುಕೊಂಡು, ಆ ಫೋಟೋವನ್ನು ‘ಹರ್ ಘರ್ ತಿರಂಗ’ (harghartiranga.com) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗಾ ಅಭಿಯಾನವು ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ. ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಹದಲ್ಲಿ ಭಾಗವಹಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಏಕತೆಯನ್ನು ಜಾಗೃತಗೊಳಿಸುವ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ ಎಂದು ಅವರು ಹೇಳಿದ್ದಾರೆ.. ಅದರ ಜೊತೆ ಸೆಲ್ಫೀ ತೆಗೆದುಕೊಂಡು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.