ತುಂಗಭದ್ರಾ ಡ್ಯಾಂನ ಕ್ರಸ್ಟ ಗೇಟ್‌ ಚೈನ್‌ ಲಿಂಕ್‌ ಕಟ್‌, ನದಿ ಪಾತ್ರದ ಜನರಲ್ಲಿ ಆಂತಕ!

ತುಂಗಭದ್ರಾ ಡ್ಯಾಂನ ಕ್ರಸ್ಟ ಗೇಟ್‌ ಚೈನ್‌ ಲಿಂಕ್‌ ಕಟ್‌, ನದಿ ಪಾತ್ರದ ಜನರಲ್ಲಿ ಆಂತಕ!

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯ ಒಟ್ಟು 105 ಟಿಎಂಸಿ ಸಾಮರ್ಥ್ಯ ಹೊಂದಿದೆ, ತುಂಗಭದ್ರಾ ಜಲಾಶಯದ 19 ನಂಬರ್ ಕ್ರಸ್ಟ್ ಗೇಟ್ನ ಚೈನ್ ತುಂಡಾಗಿ ಗೇಟ್ ಕಿತ್ತುಕೊಂಡು ಹೋಗಿದೆ ಎಂದು ಶನಿವಾರ (ಆ.10) ತಡರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೈನ್ ಕಟ್ಟಾಗಿದ್ದು ಇತಿಹಾಸದಲ್ಲೆ ಇದೇ ಮೊದಲಬಾರಿಗೆ. ಇದರಿಂದಾಗಿ ಅಪಾರ ಪ್ರಮಾಣದ ನೀರು ನದಿ ಪಾತ್ರಕ್ಕೆ ಬಿಡಲಾಗುತ್ತಿದೆ. ದುರಸ್ತಿ ಕಾರ್ಯಕ್ಕೆ 1 ವಾರ ಸಮಯ ಬೇಕು ಎಂದು ತಿಳಿದು ಬಂದಿದೆ.

1949ರಲ್ಲಿ ತುಂಗಭದ್ರಾ ಜಲಾಶಯದ ನಿರ್ಮಾಣ ಕಾರ್ಯ ಆರಂಭವಾಗಿದೆ. 1953ರಲ್ಲಿ ಜಲಾಶಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ತುಂಗಭದ್ರಾ ಜಲಾಶಯ ನಿರ್ಮಾಣ ಆರಂಭದಲ್ಲಿ ಆಂಧ್ರ, ಮದ್ರಾಸ್ ಪ್ರಾಂತ್ಯದ ಜಂಟಿ ಯೋಜನೆಯಾಗಿತ್ತು.

ಸದ್ಯ 105 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್‌ ನೀರನ್ನ ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನ ನೋಡೋದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ನಿಗಾ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಜಲಶಯದ ಸ್ಥಿತಿಯ ಬಗ್ಗೆಈಗಾಗಲೆ ನೀರವಾರಿ ಇಲಾಖೆಯ ಸಚಿವರಿಗೆ ಮತ್ತು ರಾಜ್ಯದ ಮುಖಮಂತ್ರಿಗಳಿಗೆ ತಿಳಿಸಿಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸ ಆ್ಯಪ್‌ ಚಾನೆಲ್‌ಗೆ ಭೇಟಿ ನೀಡಿ

Share this post

Post Comment