ಹುಬ್ಬಳ್ಳಿ ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸುವುದಕ್ಕೆ ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ ಒಪ್ಪಿಗೆ ಸೂಚಿಸಿ, ಆಯೋಜಕರಿಗೆ ಅನುಮತಿಯನ್ನು ಕೋಡಲಾಗಿದೆ.
ಕಳೆದ ಮೂರು ವರ್ಷಗಳಿಂದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಸ್ಠಾಪನೆಯೇ ಸಖತ್ ಸುದ್ದಿಯಾಗಿತ್ತು.ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿಯನ್ನು ಕೋರಿ 4 ರಿಂದ 5 ಸಂಘಟನೆಗಳಿಂದ ಅರ್ಜಿಯನ್ನು ಸಲ್ಲಿಸಲಾಗಿತ್ತು.ಈ ಅರ್ಜಿಗಳನ್ನು ಪರಿಶೀಲಿಸಿದಂತ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರು, ಗಜಾನನ ಉತ್ಸವ ಮಹಾ ಮಂಡಳಿಗೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಕೂರಿಸುವುದಕ್ಕೆ ಒಪ್ಪಿಗೆ ಪತ್ರವನ್ನು ನೀಡಿದ್ದಾರೆ.
ಪಾಲಿಕೆಯಿಂದ ಅನುಮತಿ ದೊರೆತ ಕಾರಣ, ಸೆ.7ರಿಂದ ಮೂರು ದಿನಗಳ ಕಾಲ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಪಾಲಿಕೆ ಅನುಮತಿ ನೀಡಿದ್ದಾರೆ.