ಕಮಲನಗರ: ಬೀದರ್ ಜಿಲ್ಲಾ ಪ್ರಥಮ ಶೈಕ್ಷಣಿಕ ಸಮ್ಮೇಳನದ ಭಿತ್ತಿ ಪತ್ರವನ್ನು ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಅವರು ಬಿಡುಗಡೆ ಮಾಡಿದರು.
ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಸ್ಮಾರಕ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲಾ ಪ್ರಥಮ ಶೈಕ್ಷಣಿಕ ಸಮ್ಮೇಳನದ ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಭಾಲ್ಕಿ ಶ್ರೀ ಗುರುಬಸವ ಪಟ್ಟದ್ದೇವರು, ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ, ಮುಖಂಡ ಪ್ರಕಾಶ ಟೊಣ್ಣೆ, ಡಾ.ಸಂಜೀವಕುಮಾರ ಜುಮ್ಮಾ, ಕೋಶಾಧ್ಯಕ್ಷ ಯಶವಂತ ಬಿರಾದಾರ, ಉಪಾಧ್ಯಕ್ಷ ಧನರಾಜ ಭವರಾ , ಮಾರ್ಗದರ್ಶಕ ಧನರಾಜ ಸೊಲ್ಲಾಪುರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.