ಕೆ ಸುಧಾಕರ್‌ಗೆ ಕೋವಿಡ್‌ ಅಕ್ರಮ ಸಂಕಷ್ಟ

ಕೆ ಸುಧಾಕರ್‌ಗೆ ಕೋವಿಡ್‌ ಅಕ್ರಮ ಸಂಕಷ್ಟ

ಹಲವರ ಸಾವು ನೋವಿಗೆ ಕಾರಣವಾಗಿದ್ದ ಕೋವಿಡ್ 19 ನಿರ್ವಹಣೆಯಲ್ಲಿ ನಡೆದ ಅಕ್ರಮ ಆರೋಪ ಇದೀಗ ಮಾಜಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಗೆ ಉರುಳಾಗುವ ಸಾಧ್ಯತೆ ಇದೆ. ಕೋವಿಡ್‌ ಅಕ್ರಮಗಳ ಬಗ್ಗೆ ಮಧ್ಯಂತರ ವರದಿಯನ್ನು ಸಂಪುಟದ ಮುಂದೆ ಮಂಡಿಸುವ ಸಾಧ್ಯತೆ ಇದೆ.

ಕೋವಿಡ್‌ 19 ನಿರ್ವಹಣೆಗಾಗಿ ಖರೀದಿ ಮಾಡಿದ್ದ ಕಿಟ್‌ಗಳು ಹಾಗೂ ಉಪಕರಣಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಮಾಡಲಾಗಿತ್ತು. ಅಂದು ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಈ ಹಗರಣ ಆರೋಪದ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿತ್ತು. ಹಗರಣ ಅರೋಪ ಎದುರಿಸುತ್ತಿರುವ ಡಾ.ಕೆ ಸುಧಾಕರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿತ್ತು.

ಇದರ ಜೊತೆಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕೋವಿಡ್ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಲಾಗಿತ್ತು. ಅದರಂತೆ ಬಹುಮತದಿಂದ ಅಧಿಕಾರ ಏರಿದ ಕಾಂಗ್ರೆಸ್ ಕೋವಿಡ್ ಅಕ್ರಮಗಳ ತನಿಖೆಗೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ ಕುನ್ಹಾ ಅವರ ನೇತೃತ್ವದಲ್ಲಿ ಆಯೋಗವನ್ನು ಸ್ಥಾಪಿಸಲಾಗಿತ್ತು.

Share this post

Post Comment