ಹೊರಬೀಳುತ್ತಾ ದರ್ಶನ್ ಬಗ್ಗೆ ಸ್ಫೋಟಕ ಮಾಹಿತಿ, ಇಂದು ಅಥವಾ ನಾಳೆ ಚಾರ್ಜ್‌ಶೀಟ್ ಸಲ್ಲಿಕೆ

ಹೊರಬೀಳುತ್ತಾ ದರ್ಶನ್ ಬಗ್ಗೆ ಸ್ಫೋಟಕ ಮಾಹಿತಿ, ಇಂದು ಅಥವಾ ನಾಳೆ  ಚಾರ್ಜ್‌ಶೀಟ್ ಸಲ್ಲಿಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ವಿಜಯನಗರ ಉಪವಿಭಾಗ ಪೊಲೀಸರು ಇಂದು ಅಥವಾ ನಾಳೆಯೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವುದು ನಿಚ್ಚಳವಾಗಿದೆ. ಇದಕ್ಕೆ ಸೂಚ್ಯವಾಗಿ ‘ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗುವುದು’ ಎಂದು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ.

\ರೇಣುಕಾಸ್ವಾಮಿ ಹತ್ಯೆ ಕುರಿತು ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ. ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮುನ್ನ ವಿಶೇಷ ಸರಕಾರಿ ಅಭಿಯೋಜಕರ ಅವಗಾಹನೆಗೆ ನೀಡಲಾಗಿದೆ. ಕೆಲವೊಂದು ಅಂಶಗಳ ಕುರಿತು ಎಸ್‌ಪಿಪಿ ಪರಿಶೀಲಿಸುತ್ತಿದ್ದಾರೆ. ಈ ಕಾರ್ಯ ಪೂರ್ಣಗೊಂಡ ಬಳಿಕ ತನಿಖಾಧಿಕಾರಿ ಚಾರ್ಜ್‌ಶೀಟ್ ಸಲ್ಲಿಸಲಿದ್ದಾರೆ,’’ ಎಂದು ಆಯುಕ್ತರು ತಿಳಿಸಿದ್ದಾರೆ.

Share this post

Post Comment