ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಭಾಗ್ಯಶ್ರೀ ಎಂಬ ಯುವತಿಯನ್ನ ಭೀಕರವಾಗಿ ಕೊಲೆಮಾಡಿ ಮುಳ್ಳು ಕಂಟಿಯಲ್ಲಿ ಶವ ಬಿಸಾಡಿ ಹೋಗಿರುವ ಅಪರಾಧಿಗಳಿಗೆ ಕಾನೂನಿನ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬೀದರ್ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಲಾಯಿತು.
ಆ ಹೆಣ್ಣುಮಗುವಿನ ಹತ್ಯೆ ಮಾಡಿರುವ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕೃತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ.
ಈ ಘಟನೆಯಿಂದ ರಾಜ್ಯದ ಮಹಿಳೆಯರು, ವಿದ್ಯಾರ್ಥಿ ಸಮುದಾಯ ಭಯಭೀತಗೊಂಡಿದೆ, ರಾಜ್ಯಾಧ್ಯಂತ ಈ ರೀತಿಯ ಸಂಭಾವ್ಯ ಘಟನೆಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಆಗ್ರಹಿಸಿದರು.