ಕೋವಿಡ್ ಹಗರಣದ ತನಿಖಾ ವರದಿ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿದೆ ಎಂಬ ಬಗ್ಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನವರು ಕೆಂಪಣ್ಣ ಆಯೋಗದ ವರದಿಯನ್ನು ಯಾಕೆ ಬಿಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.
ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕೋರ್ಟ್ನಲ್ಲಿ ಈ ಪ್ರಕರಣದ ಬಗ್ಗೆ ವಾದ ಪ್ರತಿವಾದ ಆಗಿದೆ. ಸಿಎಂ ಪರ ವಕೀಲರು ವಾದ ಮಾಡಲು ಸಮಯ ಕೇಳುತ್ತಿದ್ದಾರೆ ಎಂದು ಹೇಳಿದರು.
ರಾಜ್ಯುಕ್ಕೆ ಅನೇಕ ಕೊಡುಗೆಗಳನ್ನು ಎನ್ಯು ಆಸ್ಪತ್ರೆ ಕೊಟ್ಟಿದೆ. ಶಿವಮೊಗ್ಗದಲ್ಲಿ ಹಲವಾರು ಕುಟುಂಗಳಿಗೆ ಯಶಸ್ವಿಯಾಗಿ ಕಿಡ್ನಿ ಕಸಿ ಮಾಡಿದ್ದಾರೆ. ಶಿವಮೊಗ್ಗಕ್ಕೆ ಇಂತಹ ಒಂದು ಆಸ್ಪತ್ರೆ ಅವಶ್ಯಕವಾಗಿತ್ತು. ಇಲ್ಲವಾದರೆ ಬೆಂಗಳೂರು ಅಥವಾ ಮಂಗಳೂರಿಗೆ ಆಸ್ಪತ್ರೆಗೆ ಹೋಗಬೇಕಿತ್ತು. ಇದೀಗ ಆ ಸೌಲಭ್ಯ ಶಿವಮೊಗ್ಗದಲ್ಲಿ ದೊರೆಯುತ್ತಿದೆ ಎಂದು ತಿಳಿಸಿದ್ದರು.
ಇತ್ತೀಚೆಗೆ ಕಿಡ್ನಿ ಸಮಸ್ಯೆ ಎದುರಿಸುತ್ತಿರುವವರು ಬಹಳ ಜನಗಳು ಇದ್ದಾರೆ. ಕಿಡ್ನಿ ಸಮಸ್ಯೆಗೆ ಒಳಗಾದವರಿಗೆ ಕುಟುಂಬದವರು ಯಾರಾದರೂ ಕಿಡ್ನಿ ದಾನ ಮಾಡಬಹುದು. ಆದರೆ ಆ ಕಿಡ್ನಿ ಮ್ಯಾಚ್ ಆಗಬೇಕು. ನಾನು ಮುಖ್ಯಮಂತ್ರಿ ಆಗಿದ್ದಾಗ ಅಂಗಾಂಗ ಚಿಕಿತ್ಸೆಗೆ 30 ಕೋಟಿ ರೂ. ಹಣ ಇಟ್ಟಿದ್ದೆ. ಆದರೆ, ತದನಂತರ ಅದರ ಬಗ್ಗೆ ಯಾರೂ ಗಮನ ಕೊಡಲಿಲ್ಲ ಎಂದು ಹೇಳಿದ್ದಾರೆ.