ಇಂದು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗಯ ಮೊದಲನೇ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದರು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಉಸ್ತುವರಿ ಸಚಿವ ಕೆ.ಎನ್. ರಾಜಣ್ಣ ಹಾಗೂ ಸಚಿವರ ಸಮ್ಮುಖದಲ್ಲಿ ಸಿಎಂ ಯೋಜನೆಯನ್ನು ಉದ್ಘಾಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ ಈ ಯೋಜನೆಯಿಂದ ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನ ಹೊಳೆ, ಕಾಡುಮನೆ ಹೊಳೆ, ಕೇರಿ ಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ 24.01 ಟಿಎಂಸಿ ಪ್ರಮಾಣದ ಪ್ರವಾಹದ ನೀರನ್ನು 7 ಜಿಲ್ಲೆಗಳಿಗೆ ನೀರು ಹರಿಸಲಾಗುತ್ತದೆ ಎಂದು ಹೇಳಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲೂಕುಗಳ 38 ಪಟ್ಟಣ ಪ್ರದೇಶಗಳ ಹಾಗೂ 6,657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿಎಂಸಿ ಕುಡಿಯುವ ನೀರನ್ನು ಒದಗಿಸುವುದು ಹಾಗೂ 5 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ, ತುಮಕೂರು ವ್ಯಾಪ್ತಿಯಲ್ಲಿ 527 ಕೆರೆಗಳಿಗೆ 9.953 ಟಿಎಂಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ.50ರಷ್ಟು ತುಂಬಿಸಿ ಅಂರ್ತಜಲ ಮರುಪೂರಣ ಮಾಡುವ ಮಹತ್ವದ ಯೋಜನೆ ಇದು ಆಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಪರಮೇಶ್ವರ್, ಎಂ. ಬಿ ಪಾಟೀಲ್, ಕೆ.ಎನ್ ರಾಜಣ್ಣ, ಶಾಸಕರಾದ ಶರತ್ ಬಚ್ಚೇಗೌಡ, ಶಿವಲಿಂಗೇಗೌಡ, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.