ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಡಾ ಹಗರಣದಲ್ಲಿ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನೀಡಿದ್ದು, ಇದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಮುಡಾ ಹಗರಣ ಇದೀಗ ರಾಷ್ಟ್ರಪತಿ ಹಾಗೂ ಕೇಂದ್ರ ಗೃಹ ಸಚಿವಾಲಯದ ಅಂಗಳಕ್ಕೆ ಮುಟ್ಟಿದೆ.
ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ನೀಡಿರುವ ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಸಮರ ನಡೆಸಿದ್ದಾರೆ. ಇದರ ಮಧ್ಯ ಇದೀಗ ಮುಡಾ ಹಗರಣ ರಾಷ್ಟ್ರಪತಿ ಅಂಗಳಕ್ಕೆ ಮುಟ್ಟಿದೆ.
ಮುಡಾ ಹಗರಣದ ವಿಚಾರವಾಗಿ ಪ್ರತಿಭಟನೆಯಿಂದ ರಾಜ್ಯ ಸರ್ಕಾರ, ರಾಜಭವನದ ಮೇಲೆ ನಿರಂತರ ಒತ್ತಡ ಹಾಕಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ರಾಜ್ಯ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ನೀಡಿದ್ದಾರೆ.
ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿರುದ್ಧವಾಗಿ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಮಾಡಿದರು. ಅದರಂತೆ ಸಚಿವರು ಆದಿಯಾಗಿ ಶಾಸಕರು, ಮುಖಂಡರು ಕಾರ್ಯಕರ್ತರು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡಲಾಯಿತು. ಅಲ್ಲದೇ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಅಹಿಂದ ವರ್ಗ ಸಹ ರಾಜ್ಯಪಾಲರ ವಿರುದ್ಧ ಪ್ರತಿಬಟನೆ ನಡೆಸಿತ್ತು.