ಕಾರು ಅಪಘಾತ: ಸ್ಥಳದಲ್ಲಿ ಮಹಿಳೆ ಸಾವು
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಕಾರು ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಮಂಗಳೂರ ಬಂಟ್ವಾಳ ತಾಲೂಕಿನ ತಲಪಾಡಿ ಗ್ರಾಮದಲ್ಲಿ ಕಾರು ಅಪಘಾತ ಸಂಭವಿಸಿದೆ. ಪತಿ ಅನೀಶ್ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಅನೀಶ್ ಅವರನ್ನು ಖಾಸಗಿ ಆಸ್ಪತೆಗೆ ದಾಖಲಿಸಲಾಗಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿನತ್ತ ನವದಂಪತಿ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಹಾರಿ ಬಿದ್ದಿದೆ. ಈ ವೇಳೆ ಕೆ.ಎಸ್.ಆರ್.ಟಿ.ಸಿ ಬಸ್ ಗೂ ಕಾರು ಗುದ್ದಿದೆ. ಸ್ಥಳದಲ್ಲೇ ಮಾನಸಾ ಸ್ಥಳದಲ್ಲೆ ಉಸಿರು ಬಿಟ್ಟಿದ್ದಾರೆ. ಪತಿ ಸ್ಥಿತಿ ಗಂಭೀರವಾಗಿದೆ ಎಂದು ಮೆಲ್ಕಾರ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೇಳಿದಾರೆ.