ಈಜು ಸ್ಪರ್ಧೆಯಲ್ಲಿ ಬಸವಪ್ರಸಾದ ರಾಜ್ಯಮಟ್ಟಕ್ಕೆ ಆಯ್ಕೆ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಶ್ರೀ ಶರಣಬಸವೇಶ್ವರ ರೆಸಿಡೆನ್ಸಿಯಲ್ (ಎಸ್.ಬಿ.ಆರ್) ಶಾಲೆಯ 9ನೇ ತರಗತಿ ವಿದ್ಯಾರ್ಥಿ ಬಸವಪ್ರಸಾದ ಜಗದೀಶ್ ಪಾಟೀಲ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಕಲಬುರಗಿ ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದ ಈಜುಕೊಳದಲ್ಲಿ ನಡೆದ ಅಂಡರ್ -17 ಬಾಲಕರ ಈಜು ಸ್ಪರ್ಧೆಯ 100ಮೀಟರ್ ಬ್ರೆಸ್ಟ್ ಸ್ಟ್ರೋಕ್, 50ಮೀಟರ್ ಫ್ರೀ ಸ್ಟೈಲ್ ಹಾಗೂ 50ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ, ಎಸ್.ಬಿ.ಆರ್ ಶಾಲೆಯ ಪ್ರಾಚಾರ್ಯರು ಮತ್ತು ಶಿಕ್ಷಕರು ಹಾಗೂ ಈಜುಕೋಳ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.