ರೇಣುಕಾ ಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಎಲ್ಲಾ ಆರೋಪಿಗಳ ವಿರುದ್ಧ ಕೋರ್ಟಿಗೆ ಚಾರ್ಜ್ ಶೀಟ್ ಸಲಿಕೆ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕಾಗಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಪೋಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಇದೀಗ ಚಾರ್ಟ್ ಶೀಟ್ ನಲ್ಲಿನ ಮತ್ತೊಂದು ಸ್ಫೋಟಕ ವಾದಂತ ವಿಷಯ ಬಹಿರಂಗವಾಗಿದ್ದು, ಕೊಲೆಯಾದ ರೇಣುಕಾ ಸ್ವಾಮಿ ಕೇವಲ ಪವಿತ್ರಾಗೌಡ ಅಷ್ಟೇ ಅಲ್ಲದೆ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಹಲವು ನಟಿಯರಿಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋದು ಬಟ್ಟಾ ಬಯಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿರುವ ಒಂದೊಂದು ವಿಷಯಗಳು ಕೂಡ ಆಘಾತಕಾರಿ ಯಾಗಿವೆ ಎಂದು ಹೇಳಬಹುದು. ರೇಣುಕಾ ಸ್ವಾಮಿ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುವುದರಿಂದ ಹಿಡಿದು, ನಟ ದರ್ಶನ್ ಹಾಗೂ ಎಲ್ಲಾ ಆರೋಪಿಗಳು ಅರೆಸ್ಟ್ ಆಗುವವರೆಗೂ, ಹಾಗೂ ಹೇಗೆ ಕೊಲೆ ಆಯ್ತು ಎಂಬುದರ ಪ್ರತಿಯೊಂದು ಅಂಶವನ್ನು ಪೊಲೀಸರು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕೊಲೆಯಾದ ರೇಣುಕಾ ಸ್ವಾಮಿ ಕೇವಲ ಪವಿತ್ರ ಗೌಡ ಅಷ್ಟೇ ಅಲ್ಲದೆ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್ ನಿಂದ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ. ಪೊಲೀಸರ ವಿಚಾರಣೆ ವೇಳೆಯಲ್ಲಿ ಪ್ರದೋಶ್ ಮತ್ತು ವಿನಯ್ ನೀಡಿರುವ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಈ ನಟಿಯರಿಗೆ ಮಾತ್ರವಲ್ಲ, ಇನ್ನೂ ಹಲವು ನಟಿಯರಿಗೆ ಮೆಸೇಜ್ ಕಳುಹಿಸಿದ್ದ ಅನ್ನೋ ಮಾತು ಕೇಳಿಬಂದಿದೆ.