ಮುಖ್ಯಮಂತ್ರಿ ಬದಲಾವಣೆ ಬಿಜೆಪಿಯ ಸೃಷ್ಟಿ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ರಾಜುದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಿಜೆಪಿಯ ಸೃಷ್ಟಿ. ಜನರನ್ನು ಡೈವರ್ಟ್ ಮಾಡಲು ಈ ರೀತಿ ಕುತಂತ್ರ ಮಾಡುತ್ತಿದ್ದಾರೆ’ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ ಸಚಿವರಿಗೆ ಏನೋ ಕೇಳಿದಾಗ ಸುಮ್ಮನೆ ಹೇಳುತ್ತಾರೆ. ಅಷ್ಟಕ್ಕೂ ಎಲ್ಲರೂ ಒಂದೇ ಮಾತು ಹೇಳಿದ್ದಾರೆ. ಅದು ಮುಖ್ಯಮಂತ್ರಿ ಸ್ಥಾನಕ್ಕಾಗಿ ಯಾರೂ ಆಪೇಕ್ಷೆಪಟ್ಟಿಲ್ಲ ಅಂತ. ನಾನು ಕೂಡ ಎಲ್ಲರ ಜತೆ ಸಂಪರ್ಕದಲ್ಲಿದ್ದೇನೆ. ಎಲ್ಲರೂ ಸಿದ್ದರಾಮಯ್ಯ ಕಡೆಗೇ ಇದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಬದಲಾವಣೆ ವಿಚಾರ ಸೃಷ್ಟಿ ಬಿಜೆಪಿಯದ್ದು. ಜನರನ್ನು ದಾರಿ ತಪ್ಪಿಸಲು ಈ ಕೆಲಸ ಮಾಡುತ್ತಿದ್ದಾರೆ. ನಿತ್ಯ ಒಂದೊಂದು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ’ ಎಂದು ದೂರಿದರು.
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೂ ಇಲ್ಲ. ಅಂತಹ ಪ್ರಸಂಗವೂ ಇಲ್ಲ. ನಾವೆಲ್ಲರೂ ಒಂದಾಗಿಯೇ ಇದ್ದೇವೆ ಎಂದ ಅವರು ಹೇಳಿದರು.
ಕಾಂಗ್ರೆಸ್ ಸರ್ಕಾರದ ಸಂಪುಟದಲ್ಲಿ ಏನಾದರೂ ಬದಲಾವಣೆಯನ್ನು ನೀವು ನೋಡಿದ್ದೀರಾ? ಇಲ್ಲ. ಅದೇ ಬಿಜೆಪಿ ಸರ್ಕಾರ ಇದ್ದಾಗ ಏನಾಗಿತ್ತು? ಸಂಪುಟದಲ್ಲಿ ಸಾಕಷ್ಟು ಬದಲಾವಣೆ ಕಾಣುತ್ತಿತ್ತು. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ’ ಎಂದು ಸ್ಪಷ್ಟಪಡಿಸಿದರು.