ಸಚಿವ ಸತೀಶ್ ಜಾರಕಿಹೊಳಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು, ಈ ನಡುವೆ ಬಿಜೆಪಿ ಶಾಸಕರೊಬ್ಬರು ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ. ಅವರು ಮುಖ್ಯಮಂತ್ರಿಯಾದರೆ ನಮಗೆ ಸಂತೋಷ ಎಂದು ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್, ಉತ್ತರ ಕರ್ನಾಟಕದವರಾದ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಯಾದರೆ ನಮಗೆ ಸಂತೋಷವಾಗುತ್ತದೆ. ಬಿಜೆಪಿ ಪಕ್ಷದಿಂದ ಯಾರೂ ಅವರಿಗೆ ಬೆಂಬಲ ಕೊಡುವುದಿಲ್ಲ. ಆದರೆ ವೈಯಕ್ತಿಕವಾಗಿ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆದರೆ ನಮ್ಮ ಬೆಂಬಲ ಇದ್ದೆ ಇರುತ್ತದೆ ಎಂದು ನುಡಿದರು.
ಅವರು ಮುಖ್ಯಮಂತ್ರಿ ಆದ್ರೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತವೆ. ಈ ನಿಟ್ಟಿನಲ್ಲಿ ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.