ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ನಾಳೆ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ :ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕುರಿತು ನಾಳೆ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ.
ಒಂದು ವೇಳೆ ನಾಳೆ ಸಾಧ್ಯವಾಗದಿದ್ದರೆ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಾದ ಪ್ರತಿವಾದವನ್ನು ಮುಗಿಸಿ ಅಂತಿಮ ತೀರ್ಪು ನೀಡಬಹುದು ಇಲ್ಲವೇ ತೀರ್ಪನ್ನು ಕಾಯ್ದಿರಿಸಬಹುದು ಎಂದು ಕೇಳಿಬರುತ್ತಿದೆ.
ನಾಳೆ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಲಿದ್ದಾರೆ. ಇವರ ವಾದ ಮುಗಿದ ಬಳಿಕ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರವಾಗಿ ಸುಪ್ರೀಂಕೋರ್ಟ್‌ನ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತ ಅವರು ಅಂತಿಮ ವಾದ ಸಳಿಸುತ್ತಾರೆ.
ಹೈಕೋರ್ಟ್‌ನಲ್ಲಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯವನ್ನು ತೀರ್ಮಾನಿಸಬಹುದಾದ ವಾದ-ವಿವಾದ ನಡೆಯಲಿದೆ. ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಗುರುವಾರ ಅರ್ಜಿ ವಿಚಾರಣೆ ಮುಗಿಸೋಣ ಎಂದು ಅರ್ಜಿದಾರರಿಗೆ ಮೌಖಿಕ ಸೂಚನೆ ನೀಡಿದ್ದಾರೆ.