ನೂತನ ಜಾಹೀರಾತು ಪರಿಶೀಲನಾ ಸಮಿತಿ ರಚನೆ : ಆರ್‌.ಅಶೋಕ್‌

ನೂತನ ಜಾಹೀರಾತು ಪರಿಶೀಲನಾ ಸಮಿತಿ ರಚನೆ : ಆರ್‌.ಅಶೋಕ್‌

ನೂತನ ಜಾಹೀರಾತು ಪರಿಶೀಲನಾ ಸಮಿತಿ ರಚನೆ : ಆರ್‌.ಅಶೋಕ್‌

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಮಾಡಿರುವುದು ಮಾಧ್ಯಮಗಳನ್ನು ರಾಜ್ಯ ಸರ್ಕಾರ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಶಂಕೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌‍ ಸರ್ಕಾರ, ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಅವರನ್ನು ಸಮಿತಿಯಲ್ಲಿ ನೇಮಕ ಮಾಡಿದೆ.ಸಿಎಂ ಸಿದ್ದರಾಮಯ್ಯನವರೇ, ಜಾಹೀರಾತುಗಳನ್ನು ಪರಿಶೀಲನೆ ಮಾಡಲು ತಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಲ್ಲ, ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು

ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅಶೋಕ್‌, ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ ಎಂದು ಪ್ರಶ್ನೆ ಮಾಡಿದ್ದಾರೆ.

ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರ್ಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

Share this post

Post Comment