ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ : ಸಿ ಎಂ

ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ : ಸಿ ಎಂ

ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ : ಸಿ ಎಂ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಮಾಡುವ ಪ್ರತಿಭಟನೆ, ”ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ ಇದೆ ಎಂದು ಸಿ ಎಂ ಸಿದ್ದರಾಮಯ್ಯ ಅವರು ಹೇಳಿದರು.

ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರಿಗೆ, ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ ಇಂತಹ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ? ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.

ಸಿ ಎಂ ಸಿದ್ದರಾಮಯ್ಯ ಅವರ ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಮೀಸಲಾತಿ ವಿರೋಧವನ್ನು ರಕ್ತಗತವಾಗಿಸಿಕೊಂಡಿರುವ ಬಿಜೆಪಿ ನಾಯಕರಿಗೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಅರ್ಥಮಾಡಿಕೊಳ್ಳುವ ಜ್ಞಾನವಾಗಲಿ, ವ್ಯವಧಾನವಾಗಲಿ ಇಲ್ಲದಿರುವುದು ಆಶ್ಚರ್ಯವೇನಲ್ಲ. ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ ನಾನೂ ಹೇಳುತ್ತೇನೆ. ಇದು ಹೇಗೆ ಮೀಸಲಾತಿ ವಿರೋಧಿ ಹೇಳಿಕೆ ಆಗುತ್ತದೆ? ಎಂದು ಪ್ರಶ್ನಿಸಿದರು.

Share this post

Post Comment