ಬಿಜೆಪಿ ಕಾಲದ 21 ಹಗರಣಗಳ ತನಿಖೆಗೆ ಮಹತ್ವದ ಸಭೆ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಒಂದೆಡೆ ಮುಡಾ, ವಾಲ್ಮೀಕಿ ನಿಗಮದ ಹಗರಣದ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ವಿಪಕ್ಷಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಈ ಹಿಂದೆ ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಕುರಿತಾಗಿ ತನಿಖೆಗೆ ಚುರುಕು ಮುಟ್ಟಿಸಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ಇವಿಧಾನಸೌಧದಲ್ಲಿ ಮಹತ್ವದ ಸಭೆ ನೆಡಯಿತ್ತು.
ತನಿಖಾ ಸಮಿತಿಯಿಂದ ಸಭೆ ನಡೆಸಲಾಗಿದ್ದು, ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಸೇರಿದಂತೆ ಸಮಿತಿಯ ಅನೇಕ ಸದಸ್ಯರು ಭಾಗಿಯಾಗಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಈ ಹಿಂದಿನ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಕಾಲದ ಹಗರಣಗಳ ಪಟ್ಟಿಯನ್ನು ಸದನದಲ್ಲಿ ಓದಿದ್ದರು.
42.16 ಕೋಟಿ ರೂಪಾಯಿ ಎಪಿಎಂಸಿ ಹಗರಣ, ಭೋವಿ ನಿಗಮದ 87 ಕೋಟಿ ರೂಪಾಯಿ ಹಗರಣ, ದೇವರಾಜ ಅರಸು ಟ್ರಕ್ ಟರ್ಮಿನಲ್ನಲ್ಲಿ ರೂ.47.10 ಕೋಟಿ, ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿ ವಿವಿಧ ನಿಗಮಗಳಲ್ಲಿ ರೂ.437 ಕೋಟಿ, ಕಿಯೋನಿಕ್ಸ್ನಲ್ಲಿ ರೂ.500 ಕೋಟಿ ಹಗರಣ, ಪ್ರಮುಖವಾಗಿ ಕೊವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿ, ಭದ್ರಾ ಮೇಲ್ದಂಡೆ ಯೋಜನೆ, ಬಿಟ್ ಕಾಯಿನ್ ಹಗರಣ ನಡೆದಿದೆ ಎಂದು ಮುಖ್ಯಮಂತ್ರಿ ಅಂದು ಪಟ್ಟಿ ಓದಿದ್ದರು.