ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಜಿಲ್ಲೆಯಾದ್ಯಂತ ನಡೆದ ರಾಷ್ಟ್ರೀಯ ಅದಾಲತ್‌ನಲ್ಲಿ ಒಟ್ಟು 10 ಪೀಠಗಳ ರಚನೆ ಮಾಡಲಾಗಿತ್ತು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷಕರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಬಿ.ಎಸ್ ರೇಖಾ ಅವರು ತಿಳಿಸಿದ್ದಾರೆ.
ಯಾದಗಿರಿ ಗೌರವಾನ್ವಿತ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 31, ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 188, ಯಾದಗಿರಿ ಜೆ.ಎಮ್.ಎಫ್.ಸಿ ನ್ಯಾಯಾಧೀಶ ನ್ಯಾಯಾಲಯದಲ್ಲಿ 232, ಯಾದಗಿರಿ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶ ನ್ಯಾಯಾಲಯದಲ್ಲಿ 374, ಶಹಾಪೂರ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 398, ಶಹಾಪೂರ ಜೆ.ಎಮ್.ಎಫ್.ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 661, ಶಹಾಪೂರ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 715, ಸುರಪುರ ಹಿರಿಯ ಸಿವಿಲ್ ನ್ಯಾಯಾಧೀಶ ನ್ಯಾಯಾಲಯದಲ್ಲಿ 412, ಸುರಪುರ ಜೆ.ಎಮ್.ಎಫ್.ಸಿ ನ್ಯಾಯಾಧೀಶ ನ್ಯಾಯಾಲಯದಲ್ಲಿ 468, ಸುರಪುರ ಹೆಚ್ವುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 564, ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.
ಜಿಲ್ಲೆದ್ಯಂತ ಒಟ್ಟಾರೆ 4 ಹಣ ವಸೂಲಿ ದಾವೆ, 36 ವಿಭಾಗ ಕೋರಿದ ದಾವೆಗಳು 12 ನಿರ್ದಿಷ್ಟ ಹಕ್ಕುಗಳ ಪರಿಹಾರ ದಾವೆಗಳು, 1 ಅಂತಿಮ ಡಿಕ್ರಿ ಪ್ರಕರಣಗಳು (20 ಚೆಕ್ ಅಮಾನ್ಯ ಪ್ರಕರಣಗಳು, 11 (ಜಾರಿ ಅರ್ಜಿ), 29 ಮೋಟಾರು ವಾಹನ ಅಪಘಾತ, 225 ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿ 2 ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ (ಆ.ಗಿ), 1657 ಜನನಕ್ಕೆ ಸಂಬAಧಿಸಿದ ಪ್ರಕರಣಗಳ ಅರ್ಜಿ ಮತ್ತು 13 ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, 1968 ಲಘು ಪ್ರಕರಣಗಳು, ಹಾಗೂ 21 ಇತರೆ ಅಪರಾಧಿಕ ಪ್ರಕರಣಗಳು ಜಿಲ್ಲಾದ್ಯಂತ ಇತ್ಯರ್ಥಗೊಂಡವು. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ 4,043 ಹಾಗೂ ವ್ಯಾಜ್ಯಪೂರ್ವ 10,103 (ಕಂದಾಯ, ಮೋಟರ್ ವಾಹನ ಕಾಯ್ದೆ ಉಲ್ಲಂಘನೆ) ಪ್ರಕರಣಗಳನ್ನು (ಪಿ.ಎಲ್.ಸಿ) ಸೇರಿ ಒಟ್ಟು 14,146 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ.
ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮರಿಯಪ್ಪ ತಿಳಿಸಿದ್ದಾರೆ.