ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ, ಅಭಿವೃದ್ಧಿಗೆ ಮಹತ್ವದ ನಿರ್ಣಯ

ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ, ಅಭಿವೃದ್ಧಿಗೆ ಮಹತ್ವದ ನಿರ್ಣಯ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ನಾಳೆ ಕಲಬುರಗಿ  ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟ ಭಾಗದ ಅಭಿವೃದ್ಧಿಗೆ ಸಂಬಂಧಿಸಿ ವಿವಿಧ ಇಲಾಖೆಗಳ ಪ್ರಸ್ತಾವನೆಗಳ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದರು.

ಈ ಬಗ್ಗ ಮಾಹಿತಿ ನೀಡಿದ ಅವರು, ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ಭರ್ತಿ, ಶಿಕ್ಷಣ ಇಲಾಖೆ, ನೀರಾವರಿ ಇಲಾಖೆ, ಗ್ರಾಮೀಣ, ಐಟಿ-ಬಿಟಿ ಸೇರಿದಂತೆ ವಿವಿಧ ಇಲಾಖೆಗಳ ಸಂಬಂಧದ ಪ್ರಸ್ತಾವನೆಗಳ ಕುರಿತಾಗಿ ಮಹತ್ವದ ತೀರ್ಮಾನ ಕೈಗೊಳ್ಳುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು.

ಸುಮಾರು 10 ವರ್ಷಗಳ ನಂತರ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆಗೆ ತೀರ್ಮಾನಿಸಿದ್ದು, ಈ ಸಭೆಯಲ್ಲಿ ರಾಜ್ಯಮಟ್ಟದಲ್ಲಿ ಆರ್ಥಿಕ ಇಲಾಖೆಯ ಬಳಿ ಇರುವ ಪ್ರಸ್ತಾವಗಳಿಗೆ ನಾಳೆ ಒಪ್ಪಿಗೆ ಸಿಗಲಿದೆ ಎಂದು ಮಾಹಿತಿ ಕೋಟರು. ಇನ್ನು ನಾಳೆಯೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಇದ್ದು, ಅದೇ ದಿನ ನಡೆಯಲಿರುವ ಸಚಿವ ಸಂಪುಟ ಸಭೆಯು ಮಹತ್ವದ ಪಡೆದುಕೊಳ್ಳಲಿದೆ ಎಂದು ಹೇಳಿದರು.

Share this post

Post Comment