ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ17 ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ಸೆಪ್ಟೆಂಬರ್ 30ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿ ವಿಚಾರಣಾ ನ್ಯಾಯಾಲಯ ಆದೇಶ ಹೊರಡಿಸಿದೆ. ಮೂರು ತಿಂಗಳಿನಿಂದ ಜೈಲಿನಲ್ಲಿರುವ ನಟ ದರ್ಶನ್ ಇದೀಗ ಸೆಪ್ಟೆಂಬರ್ ತಿಂಗಳನ್ನು ಕೂಡ ಜೈಲಿನಲ್ಲೇ ಕಳೆಯಲಿದ್ದಾರೆ ಎಂದು ಜಡ್ಜ್ ಆದೇಶ ಹೊರಡಿಸಿದರು.
ಇಂದು 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗುತ್ತಿದ್ದ ಕಾರಣ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್‌ನ ಎದುರು ಹಾಜರುಪಡಿಸಲಾಗಿತ್ತು. ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಜಡ್ಜ್ ಆದೇಶ ಹೊರಡಿಸಿದರು.