ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್ : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಅರ್ಥಾತ್ ಸಿದ್ದರಾಮಯ್ಯ 14 ನಿವೇಶನಗಳ ವಾಪಸ್ ಕೊಡುವ ನಿರ್ಧಾರ ಕೈಗೊಂಡಿದ್ದಾರೆ ಎಂದರೆ ಕಾನೂನಿನ ಕುಣಿಕೆಯಿಂದ ಪಾರಾಗಲು, ಅನುಕಂಪ ಪಡೆಯಲು ಹಾಗೂ ಸ್ವಪಕ್ಷದಲ್ಲೇ ತೊಡೆ ತಟ್ಟುವವರ ಎದುರಿಸುವ ಲೆಕ್ಕಾಚಾರದಿಂದ ಸಿದ್ದರಾಮಯ್ಯ ನಿವೇಶನಗಳ ವಾಪಸ್ ಕೊಡುವ ನಿರ್ಧಾರ ಕೈಗೊಂಡಿರುವುದು ರಾಜಕೀಯ ಡ್ರಾಮಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.
ಇಂದು ಬಿ.ವೈ.ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಸಿಎಂ ಕುಟುಂಬಕ್ಕೆ ಹಂಚಿಕೆಯಾದ ಮುಡಾ ನಿವೇಶನಗಳ ವಾಪಸ್ ಕೊಡುವ ನಿರ್ಣಯ ಮಾಡಿದ್ದಾರೆ ಎಂದರೆ ತಪ್ಪು ಒಪ್ಪಿಕೊಂಡಿದ್ದಾರೆ ಎಂದೇ ಅರ್ಥ. ಮುಖ್ಯಮಂತ್ರಿಯವರು ತಮ್ಮ ತಪ್ಪು ಒಪ್ಪಿಕೊಳ್ಳುವ ಸಂದರ್ಭ ಬರುತ್ತದೆ ಎಂದು ಈ ಹಿಂದೆಯೇ ಹೇಳಿದ್ದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನಾದರೂ ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ರಾಜೀನಾಮೆ ನೀಡುವ ಮೊದಲು ಮುಖ್ಯಮಂತ್ರಿ ರಾಜ್ಯಪಾಲರ ಕ್ಷಮೆ ಕೇಳಬೇಕು. ಡಿಜಿಪಿಯವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಹತ್ತರ ಬೆಳವಣಿಗೆಯಲ್ಲಿ ಸಿಎಂ ಪತ್ನಿ ಸಿದ್ದರಾಮಯ್ಯ, ಪುತ್ರ ಗಮನಕ್ಕೂ ಬಾರದೇ ಸಿಎಂ ಅಧಿಕೃತ ನಿವಾಸದಿಂದಲೇ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ಅವರಾಗಿಯೇ ಪತ್ರ ಬರೆದಿದ್ದಾರೋ ಅಥವಾ ಬಲವಂತವಾಗಿ ಬರೆದಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು. ನಾನು ಜಗ್ಗಲ್ಲ, ಬಗ್ಗಲ್ಲ ಅಂತಾ ಸಿದ್ದರಾಮಯ್ಯ ಆರ್ಭಟ ಮಾಡುತ್ತಿದ್ದರು. ನಾನ್ಯಾಕೆ ನಿವೇಶನಗಳ ವಾಪಸ್ ಕೊಡಬೇಕು, ನನಗೆ 62 ಕೋಟಿ ರೂ. ಕೊಡುತ್ತಾರಾ ಅಂತಾ ಸಿಎಂ ಹೇಳಿದ್ದರು. ಸಾಮಾಜಿಕ ಕಾರ್ಯಕರ್ತರು ಕೊಟ್ಟ ದೂರು, ಅದರ ಆಧಾರದಲ್ಲಿ ರಾಜ್ಯಪಾಲರು ಕೊಟ್ಟ ಅನುಮತಿ, ಕೋರ್ಟ್ ಆದೇಶ ಎಲ್ಲವೂ ಆಗಿದೆ ಎಂದು ತಿಳಿಸಿದರು.