ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತ ವತಿಯಿಂದ ರಾಯಚೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಕನ್ನಡ ಸಂಭ್ರಮ-50 ಗೋಕಾಕ್ ಚಳುವಳಿ ಹಿನ್ನೋಟ-ಮುನ್ನೋಟ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಗೋಕಾಕ್ ಚಳುವಳಿಯಲ್ಲಿ ಭಾಗಿಯಾಗಿ ಕನ್ನಡ ಭಾಷೆಯ ಅಸ್ತಿತ್ವಕ್ಕಾಗಿ ಹೋರಾಡಿದ ಹಿರಿಯ ಹೋರಾಟಗಾರರು ಹಾಗೂ ಪತ್ರಕರ್ತರಾದ ಬೀದರ್ ಜಿಲ್ಲೆಯ ಶಿವಶರಣಪ್ಪ ವಾಲಿ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ಸಚಿವ ಶಿವರಾಜ ತಂಗಡಗಿ, ಸಣ್ಣ ನೀರಾವರಿ ಸಚಿವ ಏನ್. ಎಸ್. ಬೋಸರಾಜ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ್ಯ ಡಾ.ಪುರುಷೋತ್ತಮ ಬಿಳಿಮಲೆ ಮತ್ತಿತರರು ಉಪಸ್ಥಿತರಿದ್ದರು.