ನ್ಯೂಸ್ ಡೆಸ್ಕ್ ಬೀದರ್ : ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಟಾಕಿ ವ್ಯಾಪಾರಸ್ಥರು ಮತ್ತು ಅಂಗಡಿಗಳ ಮಾಲೀಕರೊಂದಿಗೆ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ ಆದೇಶ ಮಾಡಿದೆ. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಆದಕಾರಣ ವ್ಯಾಪಾರಸ್ಥರು ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕೆಂದು ತಿಳಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾಂತ ಪೂಜಾರ, ನಗರಸಭೆ ಆಯುಕ್ತರಾದ ಶಿವರಾಜ ರಾಠೋಡ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮುಜಾಮಿಲ್, ತಹಸೀಲ್ದಾರರು ಸೇರಿದಂತೆ ವಾಯುಮಾಲಿನ್ಯ ನಿಯಂತ್ರಣ ಅಧಿಕಾರಿ ಸಂತೋಷ ನಾಟಿಕರ ಮತ್ತು ವ್ಯಾಪಾರಸ್ಥರು ಉಪಸ್ಥಿತರಿದ್ದರು.