ಧಾರವಾಡ ತಾಲೂಕಿನ ಮನಸೂರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತಿ ಎಸ್ ಮನ್ನಿಕೇರಿ ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಮಾಡುವ ‘ಮಾತೆ ಸಾವಿತ್ರಿಬಾಯಿ ಫುಲೆ’ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಭಾಜನವಾಗಿದೆ.

ಶನಿವಾರ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಅಧಿವೇಶನದಲ್ಲಿ ಸಚಿವ ಮಧು ಬಂಗಾರಪ್ಪ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೆ.ನಾಗೇಶ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮಗ್ಗಳಿ ಹಾಗೂ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು.

ಮನಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಭಾರತಿ ಎಸ್ ಮನ್ನಿಕೇರಿ ಅವರು ಸಾವಿತ್ರಿಭಾಯಿ ಫುಲೆ ಪ್ರಶಸ್ತಿಗೆ ಭಾಜನರಾಗಿದ್ದಕ್ಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದು, ನೆಚ್ಚಿನ ಶಿಕ್ಷಕಿಗೆ ಅಭಿನಂದನೆ ಸಲ್ಲಿಸಿದ್ದಾರೆ..