ಡೌಟೇ ಬೇಡ ಮುಂದಿನ ಅವಧಿಯಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿಯಾಗಲಿದೆ. ಮತ್ತು ಒಂದು ದೇಶ ಒಂದು ಚುನಾವಣೆಯೂ ನನಸಾಗಲಿದೆ ಎಂದು ಕೇಂದ್ರ ಸಚಿವ ಅಮಿತ್ ಷಾ ಪ್ರತಿಪಾದನೆ ಮಾಡಿದ್ದಾರೆ.
ತೆಲಂಗಾಣದಲ್ಲಿ ಮತ್ತೊಂದು ವರ್ಷದ ಮಟ್ಟಿಗೆ ಗುಟ್ಕಾ ಮತ್ತು ಪಾನ್ ಮಸಾಲವನ್ನು ನಿಷೇಧಿಸಲಾಗಿದೆ. ಗುಟ್ಕಾ, ಪಾನ್ ಮಸಾಲಾ ತಯಾರಿಕೆ, ಮಾರಾಟ, ಸಾಗಾಟ ಹಾಗೂ ವಿತರಣೆಯನ್ನು ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಐಪಿಎಲ್ 2024ರ ಫೈನಲ್ ಪಂದ್ಯದಲ್ಲಿ ಎಸ್ಆರ್ಎಚ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ನಂತರ ಸಾಧಿಸಿ ಕೆಕೆಆರ್ ಇತಿಹಾಸ ಸೃಷ್ಟಿಸಿದೆ. ಇದೇ ವೇಳೆ ಶಾರುಖ್ ಖಾನ್ ಅವರು ಗೌತಮ್ ಗಂಭೀರ್ ಹಣೆಗೆ ಮುತ್ತಿಟ್ಟು ಸಂಭ್ರಮಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ನಾಯಕರು “ಡ್ರಗ್ನ ಹೋಲ್ಸೇಲ್ ವ್ಯಾಪಾರಿಗಳು” ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವ ದಿನವೇ ಬಿಜೆಪಿಗೆ ಅಂತಿಮ ಬೀಳ್ಕೊಡುಗೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಭವಿಷ್ಯ ನುಡಿದಿದ್ದಾರೆ.
ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಇದೀಗ ಮದ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಅರವಿಂದ್ ಕೇಜ್ರಿವಾಲ್, ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
‘ರೆಮಲ್’ ಸೈಕ್ಲೋನ್ ಆರ್ಭಟಕ್ಕೆ ಬ್ರೇಕ್ ಹಾಕಲು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಸಹ ರೆಮಲ್ ಚಂಡಮಾರುತದ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.