ಉಡುಪಿ, ಜೂನ್ 04: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದು, ಅಧೀಕೃತ ಘೋಷಣೆಯೊಂದೇ ಬಾಕಿ ಇದೆ
ಕೋಟ ಶ್ರೀನಿವಾಸ ಪೂಜಾರಿ 5,27,714 ಲಕ್ಷ ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 3,45,563 ಲಕ್ಷ ಮತಗಳನ್ನು ಪಡೆದಿದ್ದಾರೆ. ಬಿಜೆಪಿಗೆ 1,82,151 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಒಟ್ಟು 9,63,738 ಮತದಾರರಿದ್ದು, 4,75, 419 ಪುರುಷ ಮತದಾರರು ಹಾಗೂ 4,88,284 ಮಹಿಳಾ ಮತದಾರರಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಈ ಬಾರಿಯೂ ಬಿಜೆಪಿ ಪಾಲಾಗಿದೆ.