ಪ್ರಯಾಣಿಕರಿಗೆ ಬಿಗ್‌ ಶಾಕ್‌ : ಶೀಘ್ರವೇ ʻKSRTCʼ ಬಸ್‌ ಪ್ರಯಾಣ ದರ ಏರಿಕೆ!

ಪ್ರಯಾಣಿಕರಿಗೆ ಬಿಗ್‌ ಶಾಕ್‌ : ಶೀಘ್ರವೇ ʻKSRTCʼ ಬಸ್‌ ಪ್ರಯಾಣ ದರ ಏರಿಕೆ!

ಬೆಂಗಳೂರು : ಲೋಕಸಭೆ ಚುನಾವಣೆಯ ಬೆನ್ನಲ್ಲೇ ರಾಜ್ಯ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಬಿಗ್‌ ಶಾಕ್‌ ನೀಡಿದೆ. ಶೀಘ್ರವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಪ್ರಯಾಣ ದರ ಶೇ.10ರಿಂದ 15 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ವರ್ಷದಿಂದ ವರ್ಷಕ್ಕೆ ಡೀಸೆಲ್‌, ಬಿಡಿ ಭಾಗಗಳ ದರ ಹೆಚ್ಚಳ, ಸಿಬ್ಬಂದಿ ವೇತನ ಹೆಚ್ಚಳ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಖರ್ಚು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ಸಾರಿಗೆ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆ ಇದೆ.

ಸಾರಿಗೆ ಬಸ್‌ ಪ್ರಯಾಣ ದರ ಏಇಕೆಗೆ ಸಂಬಂಧಿಸಿದಂತೆ ಚರ್ಚೆಗಳು ಶುರುವಾಗಿದ್ದು, ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

Share this post

Post Comment