ಸಾರಿಗೆ ಬಸ್​ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ : ಇಬ್ಬರು ವಿದ್ಯಾರ್ಥಿಗಳು ಸ್ಥಳದಲೇ ಸಾವು

ಸಾರಿಗೆ ಬಸ್​ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ : ಇಬ್ಬರು ವಿದ್ಯಾರ್ಥಿಗಳು ಸ್ಥಳದಲೇ ಸಾವು

ಸಾರಿಗೆ ಬಸ್​ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು, ಕೈಕಾಲು ಛಿದ್ರಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ.

ಈ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಇನ್ನುಗಂಭೀರ ಗಾಯಗೊಂಡ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ. ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ. ಉಳಿದ ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಪೋಷಕರು ಘಟನೆ ನಡೆದ ಸ್ಥಳಕ್ಕೆ ಬಂದು ರೋದಿಸಿದ್ದಾರೆ. ಮಕ್ಕಳ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅತ್ತಿದ್ದು, ಪೋಷಕರ ಆಕ್ರಂದನ ಮುಗಿಲು ತಲುಪಿದೆ.

Share this post

Post Comment