ರಾಜ್ಯಪಾಲರ ವಿರುದ್ಧ ವಿವಿಧ ಪ್ರಗತಿಪರ ಮುಖಂಡರು ಸಿಡಿದೆದ್ದಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಅವರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ನಿರ್ಧರ ಮಾಡಿದ್ದಾರೆ. ರಾಜ್ಯಪಾಲರ ನಡೆದೆ ಘೇರಾವ್ ಆಂದೋಲನಕ್ಕೂ ಕರೆ ನೀಡಿರುವುದಾಗಿ ಪ್ರಗತಿಪರ ಚಿಂತಕರು, ಮುಖಂಡರು ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಪ್ರಗತಿಪರ ಚಿತಂಕರರು, ಕರ್ನಾಟಕದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲಟ್ ಅವರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ಕೋಮುವಾದಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಜಾತಿವಾದಿ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಪಕ್ಷಗಳ ಕಛೇರಿಯನ್ನಾಗಿ ರಾಜಭವನವನ್ನು ಪರಿವರ್ತಿಸಿಕೊಂಡಿದ್ದಾರೆ ಎಂಬುದು ಇಡೀ ದೇಶಕ್ಕೆ ಗೊತ್ತಾಗಿದೆ. ಜನರಿಂದ ಆಯ್ಕೆಯಾದ ಸರ್ಕಾರದ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿಗಳ ವಿರುದ್ಧ ನಡೆಯುತ್ತಿರುವ ಪಿತೂರಿ-ಷಡ್ಯಂತ್ರಗಳ ಭಾಗವಾಗಿ ರಾಜ್ಯಪಾಲರು ವರ್ತಿಸುತ್ತಿದ್ದಾರೆ. ಆ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಹೇಳಿದರು.
ಕರ್ನಾಟಕ ಲೋಕಾಯುಕ್ತ, ಎಸ್.ಐ.ಟಿ ಮುಂತಾದ ತನಿಖಾ ಸಂಸ್ಥೆಗಳು ಪ್ರಾಥಮಿಕ ತನಿಖೆ ಮಾಡಿ ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರು ಎಂದು ಮೇಲ್ನೋಟಕ್ಕೆ ಸಾಬೀತಾದ ಪ್ರಮುಖ ಪ್ರಕರಣಗಳಾದ ಕುಮಾರಸ್ವಾಮಿಯವರ ಗಣಿ ಹಗರಣ, ಶಶಿಕಲಾ ಜೊಲ್ಲೆಯವರ ಮೊಟ್ಟೆ ಹಗರಣ, ಜನಾರ್ಧನ ರೆಡ್ಡಿಯವರ ಭೀಕರ ಆಸ್ತಿ ಗಳಿಕೆ, ನಿರಾಣಿಯವರ ಭ್ರಷ್ಟಾಚಾರಗಳ ಕುರಿತು ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡಿ ಎಂದು ರಾಜಭವನಕ್ಕೆ ಕೋರಿಕೆ ಸಲ್ಲಿಸಿ ವರ್ಷಗಳಾದರೂ ಈ ರಾಜ್ಯಪಾಲರು ಆ ಕೋರಿಕೆಗಳನ್ನು ಕಸದ ಬಗೆ ಎಸೆದು ಪಕ್ಷಪಾತ ಮಾಡಿದ್ದಾರೆ. ಇದುವರೆಗೆ ಒಬ್ಬರ ಮೇಲೂ ವಿಚಾರಣೆಗೆ ಅನುಮತಿ ನೀಡಿಲ್ಲ ಎಂದು ತಿಳಿಸಿದ್ದಾರೆ.
ಈ ಅಭಿಯಾನದಲ್ಲಿ ಕೆ.ಎಂ ರಾಮಚಂದ್ರಪ್ಪ, ಮಾವಳ್ಳಿ ಶಂಕರ್, ಎಣ್ಣೆಗೆರೆ ಆರ್. ವೆಂಕಟರಾಮಯ್ಯ, ಆದರ್ಶ ಯಲ್ಲಪ್ಪ, ಅನಂತನಾಯ್ಕ.ಎನ್, ನಾಥ್ ಪೂಜಾರಿ, ಮಹಮದ್ ಹೀ ಲಟ್ಟಗೇರೆ, ಅನಿಲ್ ರೆಡ್ಡಿ, ಸತೀಶ್ ಜಿ.ಕೆ, ಡಾ. ಶಿವರಾಮ್ ಸಿಂಧಗಿ, ಮೆಡಲ್ ಮುನಿ ಚಂದ್ರು ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.