ಸಿಎಂ ಅವರು ಪ್ರಾಧಿಕಾರ ರಚನೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ : ಪ್ರತಾಪ್‌ ಸಿಂಹ

ಸಿಎಂ ಅವರು ಪ್ರಾಧಿಕಾರ ರಚನೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ : ಪ್ರತಾಪ್‌ ಸಿಂಹ

ಸಿಎಂ ಅವರು ಪ್ರಾಧಿಕಾರ ರಚನೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ : ಪ್ರತಾಪ್‌ ಸಿಂಹ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ  : ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಹಾಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಹೆಸರು ಹೇಳದೆ ಮಾಜಿ ಸಂಸದ ಪ್ರತಾಪ್‌ ಸಿಂಹ ಟಾಂಗ್‌ ನೀಡಿದ್ದಾರೆ.

ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ. ಆಸ್ತಿ ಹೊಡೆದಾಟದ ಬಗ್ಗೆ ಮಾತನಾಡುವುದಿಲ್ಲ. ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದರು.

ಅಮೃತ್‌ ಯೋಜನೆ ಕುಡಿಯುವ ನೀರು ಚಾಮುಂಡಿ ಬೆಟ್ಟಕ್ಕೆ ತಲುಪದಿರಲು ಕಾರಣ ಯಾರು ಎಂದು ನಾನು ಹೇಳಿದರೆ ವಿವಾದವಾಗುತ್ತದೆ. ಪೈಪ್‌ಲೈನ್‌ ಎಲ್ಲಿ ತಡೆದು ನಿಂತಿದೆ ನೀವೆ ಹೋಗಿ ಹುಡುಕಿ ಎನ್ನುವ ಮೂಲಕ ಪರೋಕ್ಷವಾಗಿ ಹೆಸರು ಹೇಳದೆ ಸಂಸದ ಯದುವೀರ್‌ ಒಡೆಯರ್‌ ಅವರಿಗೆ ಪ್ರತಾಪ್‌ ಸಿಂಹ ಟಾಂಗ್‌ ಕೊಟ್ಟರು.

ಸಿದ್ದರಾಮಯ್ಯ ಅವರನ್ನು ಕೆಲವು ಸೈದ್ದಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್‌‍ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು ಎಂದು ಅವರು ಹೇಳಿದ್ದಾರೆ.

Share this post

Post Comment