ಮೆಟ್ರೋದಲ್ಲಿ ಪ್ರಯಾಣಿಸಿ ಸಿಎಂ ಸಿದ್ದರಾಮಯ್ಯ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ರಾಜ್ಯ ರಾಜಧಾನಿ ಬೆಂಗಳೂರು ಜನರ ಜೀವನಾಡಿ ಸಾರಿಗೆಗಳಲ್ಲಿ ನಮ್ಮ ಮೆಟ್ರೋ ಕೂಡ ಒಂದಾಗಿದೆ. ಇನ್ನು ಇದರಲ್ಲಿ ಪ್ರತಿ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಇನ್ನು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟ್ರೋದಲ್ಲಿ ಸಂಚಾರ ಮಾಡಿ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ಮಾಡಿದರು. ಬಳಿಕ ಕೆಆರ್ ಪುರದಿಂದ ವಿಧಾನ ಸೌಧದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿ ಗಮನ ಸೆಳೆದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪರೂಪಕ್ಕೆ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದು, ಈ ವೇಳೆ ಅವರು ರೈಲಿನಲ್ಲಿದ್ದ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಜನರೊಂದಿಗೆ ಸಾಮಾನ್ಯರ ರೀತಿಯಲ್ಲಿ ಮಾತನಾಡುತ್ತಾ ಕುಳಿತ್ತಿದ್ದು, ಈ ಫೋಟೋ ಅಂತೂ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಲೇ ಇದೆ.
“ಒಂದು ಸಂಸ್ಕೃತಿಯನ್ನು ಹೇಗೆ ನಾಶ ಮಾಡಬಹುದು ಎಂಬುದಕ್ಕೆ ಇದೆ ಉದಾಹರಣೆ ಆಗಿದೆ. ಹಿಂದೂಗಳ ಆರಾಧ್ಯದೈವ, ಔರಂಗಜೇಬನ ಹುಟ್ಟಡಗಿಸಿದ ಗಂಡುಗಲಿ, ಮಹಾಪರಾಕ್ರಮಿ ಶಿವಾಜಿ ಮಹಾರಾಜರು ತಮ್ಮ ಬಾಲ್ಯವನ್ನು ಕಳೆದಂತ ಶಿವಾಜಿನಗರದ ಮೆಟ್ರೋಗೆ ಸಂತ ಮೇರಿ ಹೆಸರನ್ನು ಇಡಬೇಕಂತೆ,” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.