ಶಾಲಾ ವಾಹನ ಅಪಘಾತ  ಗಾಯಾಳಿಗೆ ‘ಉಚಿತ ಚಿಕಿತ್ಸೆ ನೀಡಲು :  ಸಿಎಂ ಸಿದ್ಧರಾಮಯ್ಯ ಘೋಷಣೆ

ಶಾಲಾ ವಾಹನ ಅಪಘಾತ  ಗಾಯಾಳಿಗೆ ‘ಉಚಿತ ಚಿಕಿತ್ಸೆ ನೀಡಲು :  ಸಿಎಂ ಸಿದ್ಧರಾಮಯ್ಯ ಘೋಷಣೆ

ರಾಯಚೂರಲ್ಲಿ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಅಪಘಾತವಾಗಿತ್ತು ಈ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರೇ, ನಾಲ್ವರ ಕಾಲು ಕಟ್ ಆಗಿದೆ. ಅಲ್ಲದೇ ಹಲವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಇಂತವರಿಗೆ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸಾ ವ್ಯವಸ್ಥೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು. ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಎಂದು ಹೇಳಿದರು.

 

Share this post

Post Comment