ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಸುದ್ದಿಕೇಳಿ ಆಘಾತವಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ ಎಂದು ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಸಾವು ನೋವುಗಳುಂಟಾದ ವಿಷಯ ಕೇಳಿ ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಸಂತಾಪ ಸೂಚಿಸಿದ್ದಾರೆ. ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಮೂಲದ 13ಕ್ಕೂ ಹೆಚ್ಚು ಜನರು ಸಾವಿಗೀಡಾದ ಸಂಗತಿಯಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.