ಉತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಮತದಾನ ಆರಂಭವಾಗಿದೆ. ಸಂಜೆ 4ರವೆರೆಗೆ ನಡೆಯಲಿರುವ ಮತದಾನ ಪ್ರಕ್ರಿಯೆ ನಡೆಯಲಿದೆ.
ಈಗಾಗಲೇ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಈಗಾಗಲೇ ಮಧ್ಯಾಹ್ನ 12 ಗಂಟೆ ವರೆಗೆ ಶೇಕಡ 26 ರಷ್ಟು ಮತದಾನ ಜರುಗಿದೆ.
ಜಿಲ್ಲೆಯಲ್ಲಿ ಒಟ್ಟು 26, 786 ಮತದಾರರಿದ್ದು, 16,622 ಪುರುಷರು, ಮಹಿಳೆಯರು 10,164 ಮತದಾರರಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದ ಬೀದರ್ ಜಿಲ್ಲೆಯ 8 ತಾಲೂಕುಗಳಲ್ಲಿ 33 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ.
ಇನ್ನು ಚುನಾವಣೆ ಕರ್ತವ್ಯಕ್ಕೆ ಪಿಆರ್ ಒ, ಸೆಕ್ಟರ್ ಆಫೀಸರ್, ಪ್ಲಾಯಿಂಗ್ ಸ್ಕ್ವಾಡ್, ವಿಡಿಯೋಗ್ರಾಫರ್ ಸೇರಿ 195 ಸಿಬ್ಬಂದಿಗಳ ನೇಮಕ ಮಾಡಲಾಗಿದೆ. 33 ಮತಗಟ್ಟೆಗಳಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದು, ಮತ ಪತ್ರಗಳಲ್ಲಿ ಪ್ರಾಶಸ್ತ್ಯ ಮತದಾನದ ಮೂಲಕ ಮತ ಚಲಾವಣೆಯಾಗಲಿದೆ.