ಕರ್ನಾಟಕ ಸರ್ಕಾರವು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ದ್ಯೋಗ ಮೀಸಲಾತಿಗಾಗಿ ಹೊಸ ಕಾನೂನು ತರಲು ಮುಂದಾಗಿದೆ. ಆದ್ರೆ, ಇದಕ್ಕೆ ಉದ್ಯಮದಾರರಿಂದ ವ್ಯಾಪಕ ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿದೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.ಮುಂದಿನ ದಿನಗಳಲ್ಲಿ ಮೀಸಲಾತಿಯ ಬಗ್ಗೆ ಚರ್ಚೆಸಲಾಗುವುದು ಎಂದು ರಾಜ್ಯದ ಸಚಿವರು ತಿಳಿಸಿದ್ದಾರೆ.
ಕನ್ನಡಿಗರ ಮೀಸಲಾತಿ ವಿಧೇಯಕವನ್ನು ಪುನರ್ ಪರಿಶೀಲಿಸುತ್ತೇವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಸಂತೋಷ್ ಲಾಡ್ ಹಾಗೂ ನಾಲ್ಕೂ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಾಗುತ್ತೆ. ಕ್ಯಾಬಿನೆಟ್ನಲ್ಲಿ ಸೂಕ್ತವಾಗಿ ಮಾಹಿತಿ ಹಂಚಿಕೆಯಾಗದೆ ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ ಈ ಅಧಿವೇಶನದಲ್ಲಿ ವಿಧೇಯಕ ಮಂಡಿಸದಿರಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಈ ಮಸೂದೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಂಪನಿಯವರು ವಿರೋಧ ವ್ಯಕ್ತಪಡಿಸಿದ್ದರು. ಕಿರಣ್ ಮಜುಂದಾರ್, ಮೋಹನ್ ದಾಸ್ ಪೈ ಸೇರಿದಂತೆ ಹಲವು ಉದ್ಯಮಿಗಳು ರಾಜ್ಯ ಸರ್ಕಾರದ ನಡೆಗೆ ಅಸಮಾಧಾನ ಹೊರಹಾಕಿದ್ದರು.
ಈ ರೀತಿಯ ಕ್ರಮದಿಂದ ಐಟಿ ಉದ್ಯಮಕ್ಕೆ ತೊಂದರೆಯಾಗಲಿದೆ. ಉದ್ಯಮದಲ್ಲಿ ಗುಣಮಟ್ಟದ ಸೇವೆ ನೀಡಲು ಸಮಸ್ಯೆಯಾಗುತ್ತದೆ ಎಂದು ಉದ್ಯಮಿಗಳು ಆಕ್ಷೇಪ ಎತ್ತಿದ್ದರು. ಕೆಲವರಂತೂ ಇದು ತಾರತಮ್ಯದ ಮಸೂದೆ ಎಂದು ಆಕ್ಷೇಪ ವ್ಯಕ್ತಪಸಿಡಿದ್ದರು. ಅಲ್ಲದೇ ಕೆಲ ಐಟಿ-ಬಿಟಿಗಳು ಸಹ ಸರ್ಕಾರಕ್ಕೆ ನೀಡಿದ್ದವು. ಹೀಗೆ ಹಲವರು ಹಲವು ವ್ಯಕ್ತಿಗಳಿಂದ ನಿರ್ಧಾರಕ್ಕೆ ವಿರೋಧ ಬಂದ ನಂತರ ಸರ್ಕಾರವು ಮೀಸಲಾತಿ ಮಸೂದೆ ಮಂಡನೆ ನಿರ್ಧಾರರಿಂದ ಒಂದು ಹೆಜ್ಜೆ ಹಿಂದಕ್ಕೆ ಇಕ್ಕಿದೆ.
ಆಡಳಿತಾತ್ಮಕ ಹುದ್ದೆಗೆ 50% (ಸೂಪರ್ವೈಸರ್, ವ್ಯವಸ್ಥಾಪಕ, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು), ಆಡಳಿತೇತರ ಹುದ್ದೆಗೆ 75% (ಕರ್ಕ್, ಕೌಶಲ ರಹಿತ, ಅರೆ ಕೌಶಲ ಗುತ್ತಿಗೆ ನೌಕರ), ನಿಯಮ ಉಲ್ಲಂಘಿಸಿದರೆ 25 ಸಾವಿರ ರೂ. ವರೆಗೆ ದಂಡ ಕನಿಷ್ಟ 10 ಸಾವಿರ ರೂ., ಗರಿಷ್ಟ 25 ಸಾವಿರ ರೂ. ಎಂದು ತಿಳಿಸಿದ್ದರು.ದಂಡ ವಿಧಿಸಿದ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ
ಅರ್ಹತೆ
ಕರ್ನಾಟಕದಲ್ಲಿ ಹುಟ್ಟಿರಬೇಕು, ಕರ್ನಾಟಕದಲ್ಲಿ 15 ವರ್ಷ ವಾಸವಿರಬೇಕು ಕನ್ನಡ ಓದಲು, ಬರೆಯಲು ಮಾತನಾಡಲು ಬರಬೇಕು ಅಥವಾ ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು