ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು ತಯಾರು ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ಕೊಡುತೇನೆ ಎಂದು ಹೇಳಿದರು.
ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ. ಈ ಮಾತನ್ನು ನಿನ್ನೆಯೂ ಹೇಳಿದ್ದೆ, ಅದನ್ನೆ ಈಗಲೂ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ಹೆದರುವ ಪ್ರಶ್ನೆ ಇಲ್ಲ, ಎಲ್ಲವನ್ನು ಎದುರಿಸಲು ನಿರ್ಧರಿಸಿದ್ದೇನೆ. ಕಾನೂನು ಪರಿಣಿತರ ಜೊತೆ ಚರ್ಚೆ ಮಾಡಿ ಮುಂದಿನ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.