ಎನ್ ಡಿಎ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇನೆ – ನಿಖಿಲ್ ಕುಮಾರಸ್ವಾಮಿ

ಎನ್ ಡಿಎ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇನೆ – ನಿಖಿಲ್ ಕುಮಾರಸ್ವಾಮಿ

ನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರಿನ ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದರು.

ಈ ಬಗ್ಗೆ ಮಾತನಾಡಿದ ಅವರು, ಚೆನ್ನಪಟ್ಟಣ ಕ್ಷೇತ್ರಕ್ಕೆ ಎನ್ ಡಿ ಎ ಅಭ್ಯರ್ಥಿಗೆ ಟಿಕೆಟ್ ಸಿಗುತ್ತೆ ಎಂದು ಭಾವಿಸಿದ್ದೆ, ಆದರೆ ನನ್ನ ಮೇಲೆ ನಂಬಿಕೆಯಿಟ್ಟು ಟಿಕೆಟ್ ನೀಡಿದ್ದಾರೆ.  ಇದನ್ನು ನಾನು ಉಳಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಈಗಾಗಲೇ ಸಂಡೂರು ಹಾಗೂ ಶಿಗ್ಗಾಂವಿಗೆ ತೆರಳಿ ಪಕ್ಷದ ಕಾರ್ಯಕರ್ತರ ಬಳಿ ಸಭೆ ನಡೆಸಿದ್ದೇನೆ. ಪಕ್ಷ ಗೆಲುವಿಗೆ ಕಾರ್ಯಕರ್ತರು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ ನನಗೆ ನಂಬಿಕೆ ಇದೆ ಬಾರಿ ಮೂರರಲ್ಲಿ ಮೂರು ಕ್ಷೇತ್ರವನ್ನು ಎನ್ ಡಿ ಗೆದ್ದು ಬಿಗುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮೂರು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಇಬ್ಬರು ಕಾರ್ಯಕರ್ತರು ಬಹಳ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಇಂದು ಕುಟುಂಬ ಸಮೇತರಾಗಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು.

 ಇನ್ನು ನಿಖಿಲ್ ಕುಮಾರಸ್ವಾಮಿ ಜೊತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ಪತ್ನಿ ಸೇರಿದಂತೆ ಪಕ್ಷದ ಕೆಲ ಮುಖಂಡರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

Share this post

Post Comment