ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸಿಕೊಂಡು ಬಂದಂತಹ ಜಗತ್ತಿನ ಏಕೈಕ ದೇಶ ಭಾರತ

ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸಿಕೊಂಡು ಬಂದಂತಹ ಜಗತ್ತಿನ ಏಕೈಕ ದೇಶ ಭಾರತ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನ ಬಗ್ಗೆ ಮಾನವ ಸರಪಳಿ ನಿರ್ಮಿಸುವ ಉದ್ದೇಶ ನಾವೆಲ್ಲರೂ ಕೂಡ ಒಂದೇ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬುದಾಗಿದೆ. ನಾಡಿನ ಜನರು ಕೈ ಜೋಡಿಸಿದಾಗ ಮಾತ್ರ ರಾಜ್ಯ, ರಾಷ್ಟ್ರ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ ಭವನದ ಆವರಣದಲ್ಲಿ  ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯರಗೋಳದಿಂದ ಗೂಗಲ್ ಬ್ರಿಡ್ಜ್ ಗಡಿಯವರೆಗೆ ಹಮ್ಮಿಕೊಂಡ ಮಾನವ ಸರಪಳಿ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ದಿನ ವಿಶೇಷ ಹಾಗೂ ಇತಿಹಾಸದ ದಿನವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಬೀದರ್ ಜಿಲ್ಲೆಯಿಂದ ಚಾಮರಾಜನಗರದ ವರೆಗೆ ಸುಮಾರು ೨೫೦೦ ಕಿಲೋಮೀಟರ್ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಭಾರತ ದೇಶದಲ್ಲಿ ವಿವಿಧ ಜಾತಿ, ಧರ್ಮ, ಜನಾಂಗ, ಭಾಷೆ, ಆಚಾರ ವಿಚಾರ, ಸಂಸ್ಕೃತಿ ಇತ್ಯಾದಿಗಳ ವೈವಿದ್ಯಗಳು ಇದ್ದುರೂ, ಇಂದಿಗೂ ಕೂಡ ಭಾರತ ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸಿಕೊಂಡು ಬಂದAತಹ ಜಗತ್ತಿನ ಏಕೈಕ ದೇಶ, ಜಾತ್ಯಾತೀತ ತತ್ವಗಳ ಅಡಿಯಲ್ಲಿ ರೂಪಿತವಾದ ಸಂವಿಧಾನದಲ್ಲಿ ಎಲ್ಲರೂ ಸಮಾನರು ಎಂಬ ಭಾವನೆ ನಮ್ಮೆಲ್ಲರಲ್ಲಿ ಅಡಕವಾಗಿದೆ ಎಂದರು.

ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ ಮಾತನಾಡಿ; ಪ್ರಜಾಪ್ರಭುತ್ವ ಬಲಪಡಿಸಿ ಅದರ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಲುವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ಸಮಾನತೆ, ಸ್ವಾತಂತ್ರ‍್ಯ ಮತ್ತು ಭ್ರಾತೃತ್ವ ಸೌಹಾರ್ದತೆಯ ಭದ್ರಬುನಾದಿ ಮೇಲೆ ನಿಂತಿದೆ. ನಾವು ಆಳವಾದ, ಸಹಭಾಗಿತ್ವದ ಪ್ರಜಾಪ್ರಭುತ್ವಕ್ಕೆ ಬದ್ಧರಾಗಿರೋಣ ಮತ್ತು ಗೌರವಿಸೋಣ ಎಂದರು.

ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನಾಯಕ ಪಾಟೀಲ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲವೀಶ್ ಒರಡಿಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share this post

Post Comment