ಕಲಬುರಗಿ ತಾಲೂಕಿನ ಫರತಾಬಾದ್ ಗ್ರಾಮದಲ್ಲಿನ ಬೆಳೆಹಾನಿ ಪ್ರದೇಶಗಳಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಲಬುರಗಿ ಪ್ರವಾಸದಲ್ಲಿರುವ ಛಲವಾದಿ ನಾರಾಯಣ ಸ್ವಾಮಿ ಅವರು, ಕಲಬುರಗಿ ಜಿಲ್ಲೆಯ ಫರತಾಬಾದ್ ಸೇರಿದಂತೆ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ರೈತರೊಂದಿಗೆ ಚರ್ಚಿಸಿ ಬೆಳೆ ಹಾನಿಯ ಮಾಹಿತಿ ಪಡೆದುಕೊಂಡರು. ಇನ್ನು ನಾರಾಯಣ ಸ್ವಾಮಿ ಅವರಿಗೆ ಶಾಸಕ ಬಸವರಾಜ್ ಮತ್ತಿಮೂಡ್, ಅವಿನಾಶ್ ಜಾಧವ್, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಬಿಕೆಪಿ ಮುಖಂಡರಾದ ಬಸವರಾಜ್ ಬೆಣ್ಣೂರು ಸೇರಿದಂತೆ ಅನೇಕರು ಸಾಥ್ ನೀಡಿದರು.