ನಗರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ; ಉಸ್ತುವರಿ ಸಚಿವ ಖಂಡ್ರೆಯಿಂದ ಧ್ವಜಾರೋಹಣ

ನಗರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ; ಉಸ್ತುವರಿ ಸಚಿವ ಖಂಡ್ರೆಯಿಂದ ಧ್ವಜಾರೋಹಣ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ 

ಬೀದರ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪರಿಸರ, ‌ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ಧ್ವಜಾರೋಹಣ ನೆರವೇರಿಸಿದರು.

ಆನಂತರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು.ಬಳಿಕ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

 

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಈಶ್ವರ ಬಿ. ಖಂಡ್ರೆ, ಅನೇಕರ ತ್ಯಾಗ, ಬಲಿದಾನದಿಂದ ಕಲ್ಯಾಣ ಕರ್ನಾಟಕಕ್ಕೆ 1948, ಸೆಪ್ಟೆಂಬರ್ 17ರಂದು ವಿಮೋಚನೆ ದೊರೆತಿದೆ. ವಿಮೋಚನೆಯ ಹೋರಾಟದಲ್ಲಿ ಬೀದರ್ ಜಿಲ್ಲೆಯ ಹೋರಾಟಗಾರ ಕೊಡುಗೆ ಬಹಳ ದೊಡ್ಡದಿದೆ ಎಂದರು.

ಸಂಸದ ಸಾಗರ್ ಖಂಡ್ರೆ, ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿಸಿಎಫ್ ವಾನತಿ ಎಂ.ಎಂ., ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹಾಜರಿದ್ದರು.

Share this post

Post Comment