ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಕರವೇ ಪ್ರತಿಭಟನೆ

ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಕರವೇ ಪ್ರತಿಭಟನೆ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿಎ ನಾರಾಯಣಗೌಡ ಮತ್ತು ಸದಸ್ಯರು ಬೆಂಗಳೂರಿನ  ಫ್ರೀಡಂ ಪಾರ್ಕ್ ನಲ್ಲಿ  ಪ್ರತಿಭಟನೆ ಮಾಡಲಾಯಿತ್ತು.

ಹಿಂದಿ ದಿವಸ ಆಚರಣೆಯ ಹೆಸರಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಹೇರುವ ಹುನ್ನಾರವನ್ನು ಕೇಂದ್ರ ಸರ್ಕಾ ಮಾಡುತ್ತಿದೆ.ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದ್ದು ಕೂಡಲೇ ಹಿಂದಿ ದಿವಸ್ ಆಚರಣೆಯನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ದೇಶದಲ್ಲಿ ಅಧಿಕೃತ ರಾಷ್ಟ್ರ ಭಾಷೆ ಯಾವುದೂ ಇಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಒಕ್ಕೂಟ, ಅಖಂಡ ಭಾರತ ಉಳಿಯಬೇಕಾದರೆ ಎಲ್ಲಾ ಭಾಷೆ , ಆಚಾರ ವಿಚಾರ ಉಳಿಯಬೇಕು. ಕೆಲವು ರಾಜ್ಯಗಳಲ್ಲಿ ಹಿಂದಿ ಭಾಷಿಕರ ಸಂಖ್ಯೆ ಜಾಸ್ತಿ ಇದೆ ಎಂಬ ಮಾತ್ರಕ್ಕೆ ಘೋಷಣೆ ಸರಿಯಲ್ಲ. ಬಾಂಗ್ಲಾದೇಶ, ಪಾಕಿಸ್ತಾನ ಭಾಷೆಯಿಂದಲೇ ವಿಭಜನೆ ಆಯ್ತು, ಇದನ್ನು ಮರೆಯಬಾರದು ಎಂದು ಎಚ್ಚರಿಕೆ ಕೋಟರು.

ನಮ್ಮ ಭಾರತದಲ್ಲಿ 22 ಆಡಾಳಿತಾತ್ಮಕ ಭಾಷೆಗಳಿವೆ. ಎಲ್ಲಾ ಭಾಷೆಗಳನ್ನು ತುಳಿತಕ್ಕೆ ಒಳಪಡಿಸಲು, ಕೇಂದ್ರ ಸರ್ಕಾರ ಹಿಂದಿ ಸಪ್ತಾಹ, ಹಿಂದಿ ದಿವಸ್ ಅನ್ನುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ದೇಶದ ಹಲವು ಉದ್ಯೋಗಗಳ ಪರಿಕ್ಷೆಯಲ್ಲಿ ಹಿಂದಿಯನ್ನು ಬಲವಂತವಾಗಿ ಹೇರಿದ್ದಾರೆ. ಈಗ ಹಿಂದಿ ದಿವಸ್ ಮೂಲಕ ನಮ್ಮ ಮೇಲೆ ಹೇರಿಕೆ ನಡೆಸುತ್ತಿದ್ದಾರೆ. ಬಲವಂತವಾಗಿ ಹೇರಿಕೆ ಮಾಡುವ ಮೂಲಕ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದೀರಾ. ಹೀಗಾಗಿ ಇಂದು ಹಿಂದಿ ಕಾರ್ಯಕ್ರಮವನ್ನು ಧಿಕ್ಕರಿಸಿ ನಾವು ಕಪ್ಪು ದಿನವನ್ನಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Share this post

Post Comment