ಬೆಳೆ ಹಾನಿ ಪ್ರದೇಶಕ್ಕೆ ಸಚಿವ ರಹೀಂಖಾನ್ ಭೇಟಿ

ಬೆಳೆ ಹಾನಿ ಪ್ರದೇಶಕ್ಕೆ ಸಚಿವ ರಹೀಂಖಾನ್ ಭೇಟಿ

ಬೆಳೆ ಹಾನಿ ಪ್ರದೇಶಕ್ಕೆ ಸಚಿವ ರಹೀಂಖಾನ್ ಭೇಟಿ

ಬೀದರ್:  ತಾಲೂಕಿನಲ್ಲಿ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ಗುರುವಾರ ಭೇಟಿ ನೀಡಿದರು.

ಮಾಳೆಗಾಂವ್, ವಿಳಾಸಪುರ ಗ್ರಾಮಗಳ ಹೊಲಗಳಲ್ಲಿ ಮಳೆ ನೀರು ನಿಂತು ಹೆಸರು, ಉದ್ದು, ತೊಗರಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿದರು.

ಬೆಳೆ ಸಮೀಕ್ಷೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಹಾನಿ ವಾಸ್ತವ ವರದಿ ಸಲ್ಲಿಸಿ, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸಬೇಕು. ಮನೆ ಕಳೆದುಕೊಂಡವರಿಗೂ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಾಳೆಗಾಂವ್ ಗ್ರಾಮದಲ್ಲಿ ಕುಸಿದು ಬಿದ್ದ ಮನೆಗಳನ್ನು ವೀಕ್ಷಿಸಿದರು. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಹಾವು ಕಡಿದು ಮೃತಪಟ್ಟ ಸಬಿಯಾ ಬಾನು ಅವರ ತಂದೆಗೆ ೨ ಲಕ್ಷ ರೂಪಾಯಿ ಪರಿಹಾರ ಧನ ಮಂಜೂರಾತಿ ಪತ್ರ ವಿತರಿಸಿದರು.

ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಆರಂಭಿಸಲಾದ ಬೆಂಬಲ ಬೆಲೆ ಉದ್ದು, ಹೆಸರು ಖರೀದಿ ಕೇಂದ್ರಕ್ಕೆ ಭೇಟಿ ನೀಡಿದರು.

ಮಾಳೆಗಾಂವ್ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾಗಿದೆ. ಸ್ಥಳ ಅಂತಿಮಗೊAಡಿದೆ. ಕಟ್ಟಡ ನಿರ್ಮಾಣಕ್ಕೆ ಕೆ.ಕೆ.ಆರ್.ಡಿ.ಬಿ.ಯಿಂದ ೫ ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ವಿಳಾಸಪುರ ಗ್ರಾಮದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಆರ್.ಎ.ಡಿ. ಅಡಿಯಲ್ಲಿ ೩೯ ಫಲಾನುಭವಿಗಳಿಗೆ ತಲಾ ೩೦ ಸಾವಿರ ರೂಪಾಯಿ ಮೊತ್ತದ ಎಮ್ಮೆ, ವರ್ಮಿ ಕಾಂಪೊಸ್ಟ್ ಪೊರ್ಟೆಬಲ್ ಘಟಕ ಹಾಗೂ ಆಹಾರ ಸಂಗ್ರಹ ಘಟಕ ವಿತರಿಸಿದರು. ಸಬ್ಸಿಡಿ ಬೆಲೆಯಲ್ಲಿ ಸ್ಪಿಂಕ್ಲರ್ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ ದಿಲೀಪ ಬದೋಲೆ, ಕೃಷಿ ಜಂಟಿ ನಿರ್ದೇಶಕ ಜಿಯಾವುಲ್ಲಾ, ತಹಶೀಲ್ದಾರ್ ಡಿ.ಜಿ. ಮಹಾತ್, ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ, ಕೃಷಿ ಉಪ ನಿರ್ದೇಶಕ ರಾಘವೇಂದ್ರ ಎನ್., ಸಹಾಯಕ ನಿರ್ದೇಶಕ ಅನ್ಸಾರಿ ಎಂ.ಎ.ಕೆ. ಹಾಜರಿದ್ದರು.

Share this post

Post Comment