Modi 3.0 Budget: ಕೇಂದ್ರ ಬಜೆಟ್ ಪ್ರಮುಖಾಂಶಗಳು: ದೇಶದ ಜನರಿಗೆ ನಿರ್ಮಲಾ ಸೀತಾರಾಮನ್ ಗಿಫ್ಟ್

Modi 3.0 Budget: ಕೇಂದ್ರ ಬಜೆಟ್ ಪ್ರಮುಖಾಂಶಗಳು: ದೇಶದ ಜನರಿಗೆ ನಿರ್ಮಲಾ ಸೀತಾರಾಮನ್ ಗಿಫ್ಟ್

ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ ಬಳಿಕ ಭಾರತದ ಬಜೆಟ್ ಮಂಡನೆ ಮಾಡುತ್ತಿರುವ ಎರಡನೇ ಮಹಿಳೆ ಅನ್ನೋ ಹೆಗ್ಗಳಿಕೆ ಗಳಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 7ನೇ ಬಾರಿ ಬಜೆಟ್ ಮಂಡನೆ ಮಾಡಿದ್ಧಾರೆ. 6 ಬಾರಿ ಪೂರ್ಣಾವಧಿ ಹಾಗೂ 1 ಬಾರಿ ಮಧ್ಯಂತರ ಬಜೆಟ್ ಮಂಡಿಸಿರುವ ನಿರ್ಮಲಾ ಸೀತಾರಾಮನ್, ಮೋದಿ ಸರ್ಕಾರದ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ನಲ್ಲೇ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, ಬಜೆಟ್ನ ಪ್ರಮುಖಾಂಶಗಳು ಇಂತಿವೆ:

• ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಮುಂದಿನ 5 ವರ್ಷಕ್ಕೆ ವಿಸ್ತರಣೆ
• ಉದ್ಯೋಗ, ಎಂಎಸ್ಎಂಇ ಹಾಗೂ ಮಧ್ಯಮ ವರ್ಗದವರನ್ನು ಗುರಿಯಾಗಿಸಿ ಹಲವು ಯೋಜನೆ
• ಬಡವರು, ಮಹಿಳೆಯರು, ರೈತರು ಹಾಗೂ ಯುವಕರತ್ತ ಸರ್ಕಾರದ ಚಿತ್ತ
• ವಿಕಸಿತ ಭಾರತದ ಆಶಯದೊಂದಿಗೆ ಹಲವು ಆರ್ಥಿಕ ಸುಧಾರಣಾ ಕ್ರಮ
• ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ 1.48 ಲಕ್ಷ ಕೋಟಿ ಮೀಸಲು
• ಸಹಜ ಕೃಷಿಗೆ ಆದ್ಯತೆ ನೀಡಲು ಸರ್ಕಾರದ ಸರ್ವ ಕ್ರಮ
• ಕೇಂದ್ರ ಬಜೆಟ್ನಲ್ಲಿ ಒಟ್ಟು 9 ಅಂಶಗಳಿಗೆ ಆದ್ಯತೆ
• ಕೃಷಿ, ಉದ್ಯೋಗ, ಸಾಮಾಜಿಕ ನ್ಯಾಯ, ಸೇವೆ, ನಗರ ಅಭಿವೃದ್ಧಿ, ಇಂಧನ ಹಾಗೂ ಸಂಶೋಧನೆಗೆ ಆದ್ಯತೆ
• ಡಿಜಿಟಲ್ ಬೆಳೆ ಸರ್ವೆ ನಡೆಸಲು ಕೇಂದ್ರ ಸರ್ಕಾರದ ಒತ್ತು
• ಕಿಸಾನ್ ಕ್ರೆಡಿಟ್ ಕಾರ್ಡ್ಗಳನ್ನ 5 ರಾಜ್ಯಗಳಲ್ಲಿ ನೀಡಲು ಕೇಂದ್ರ ಸಿದ್ದತೆ

Share this post

Post Comment