ಮುಡಾ ಹಗರಣ: ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಆರಂಭ

ಮುಡಾ ಹಗರಣ: ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಆರಂಭ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ 1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಂಯ್ಯನ ಅವರು ಬುಧವಾರ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು.

ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದು, ಮುಡಾ ನಿವೇಶನ ಹಂಚಿಕೆ ಸಂಬಂಧ ವಿಚಾರಣೆ ಎದುರಿಸುತ್ತಿದ್ದಾರೆ. ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣವೊಂದರ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಈಗಾಗಲೇ ಎಲ್ಲಾ ಆರೋಪಿಗಳ ವಿಚಾರಣೆ ಮುಗಿಸಿದ್ದು, ಇಂದು ಸಿದ್ದರಾಮಯ್ಯನವರನ್ನು ವಿಚಾರಣೆ ಒಳಪಡಿಸಿದ್ದಾರೆ.

ಪ್ರಕರಣದಲ್ಲಿ 2 ಆರೋಪಿ, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, 3 ಮಲ್ಲಿಕಾರ್ಜುನ ಹಾಗೂ 4 ದೇವರಾಜು ಸೇರಿ ಹಲವರ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ.

Share this post

Post Comment