ತೀವ್ರ ಕುತೂಹಲ ಕೆರಳಿಸಿದ್ದಂತ ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬುದಾಗಿ ಉಭಯ ನಾಯಕರು ಹೆಸರನ್ನು ಘೋಷಿಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ.
ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು.